೧ ಅರಸುಗಳು 22:20

ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 22

18ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.

19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.

20ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.

21ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.

22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.

೧ ಅರಸುಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी