ಯಾಜಕಕಾಂಡ 25:24

ನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 25

22ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.

23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.

24ನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.

25ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.

26ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ

ಯಾಜಕಕಾಂಡ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी