ಯಾಜಕಕಾಂಡ 20:3

ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 20

1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

2ನೀನು ತಿರಿಗಿ ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್‌ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.

3ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.

4ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ

5ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

ಯಾಜಕಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी