ಆದಿಕಾಂಡ 22:3

ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 22

1ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.

2ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.

3ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.

4ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.

5ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು.

ಆದಿಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी