ಆದಿಕಾಂಡ 23:11

ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 23

9ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.

10ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--

11ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.

12ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.

13ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.

ಆದಿಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी