ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
32ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
33ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
34ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
35ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ