ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಸಂದರ್ಭದೊಂದಿಗೆ ಓದಿ · ಯೆಶಾಯ 61

1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

2ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ

3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

ಯೆಶಾಯ 61 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी