ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
10ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
11ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
12ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
13ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ