ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
11ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ