೨ ಪೂರ್ವಕಾಲವೃತ್ತಾಂತ 33:4

ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 33

2ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.

3ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.

4ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

5ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.

6ಬೆನ್‌ ಹಿನ್ನೋಮ್‌ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.

೨ ಪೂರ್ವಕಾಲವೃತ್ತಾಂತ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी