ರೋಮಾಪುರದವರಿಗೆ 15:30

ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 15

28ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.

29ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.

30ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

31ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ

32ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.

ರೋಮಾಪುರದವರಿಗೆ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी