ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
14ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.
15ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
16ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
17ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
18ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ