ನ್ಯಾಯಸ್ಥಾಪಕರು 14:16

ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 14

14ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು.

15ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.

16ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.

17ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.

18ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.

ನ್ಯಾಯಸ್ಥಾಪಕರು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी