ಧರ್ಮೋಪದೇಶಕಾಂಡ 9:9

ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 9

7ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.

8ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.

9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.

10ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.

11ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.

ಧರ್ಮೋಪದೇಶಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी