ಆದಿಕಾಂಡ 16:7

ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು

ಸಂದರ್ಭದೊಂದಿಗೆ ಓದಿ · ಆದಿಕಾಂಡ 16

5ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.

6ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.

7ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು

8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.

9ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.

ಆದಿಕಾಂಡ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी