ಯೆಹೆಜ್ಕೇಲನು 20:25

ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

23ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು;

24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.

25ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.

26ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.

27ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी