ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.
38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
40ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.
41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ