ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
12ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
13ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
14ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ