ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
8ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
9ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ