೧ ಅರಸುಗಳು 19:13

ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 19

11ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.

12ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು.

13ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.

14ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.

15ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್‌ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.

೧ ಅರಸುಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी