ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
12ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
14ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
16ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ