ಯೆರೆಮಿಯ 23:11

ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 23

9ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.

10ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.

11ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.

12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.

13ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.

ಯೆರೆಮಿಯ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी