ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.
26ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.
27ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
28ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.
29ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
30ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ