ಅಪೊಸ್ತಲರ ಕೃತ್ಯಗಳು 26:12

ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 26

10ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.

11ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.

12ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.

13ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.

14ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.

ಅಪೊಸ್ತಲರ ಕೃತ್ಯಗಳು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी