ಕೀರ್ತನೆಗಳು 22:25

ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 22

23ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.

24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.

25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.

26ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.

27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.

ಕೀರ್ತನೆಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी