ಮಿಕ 5:9

ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.

ಸಂದರ್ಭದೊಂದಿಗೆ ಓದಿ · ಮಿಕ 5

7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.

8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.

9ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.

10ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.

11ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.

ಮಿಕ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी