ಆದಿಕಾಂಡ 35:2

ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;

ಸಂದರ್ಭದೊಂದಿಗೆ ಓದಿ · ಆದಿಕಾಂಡ 35

1ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.

2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;

3ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.

4ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.

ಆದಿಕಾಂಡ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी