ಯೆಶಾಯ 25:8

ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 25

6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.

7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.

8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.

9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.

10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.

ಯೆಶಾಯ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी