ವಿಮೋಚನಕಾಂಡ 12:4

ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

2ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.

3ಇಸ್ರಾಯೇಲ್‌ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.

4ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.

5ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.

6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी