ಯೆಹೆಜ್ಕೇಲನು 47:2

ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 47

1ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.

2ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು.

3ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4

4ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.

ಯೆಹೆಜ್ಕೇಲನು 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी