ಹೋಶೇ 13:6

ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.

ಸಂದರ್ಭದೊಂದಿಗೆ ಓದಿ · ಹೋಶೇ 13

4ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.

5ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.

6ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.

7ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.

8ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.

ಹೋಶೇ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी