ದಾನಿಯೇಲನು 4:5

ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 4

3ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.

4ನೆಬೂಕದ್ನೆಚ್ಚರನೆಂಬ ನಾನು ನನ್ನ ಮನೆಯಲ್ಲಿ ಕ್ಷೇಮವಾಗಿಯೂ ನನ್ನ ಅರಮನೆಯಲ್ಲಿ ಸುಖವಾ ಗಿಯೂ ಇರುವಾಗ;

5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.

6ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.

7ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.

ದಾನಿಯೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी