ಯೆರೆಮಿಯ 21:10

ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 21

8ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.

9ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;

10ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.

11ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--

12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.

ಯೆರೆಮಿಯ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी