ದಾನಿಯೇಲನು 9:18

ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.

ಸಂದರ್ಭದೊಂದಿಗೆ ಓದಿ · ದಾನಿಯೇಲನು 9

16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.

17ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.

18ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.

19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.

20ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.

ದಾನಿಯೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी