ಧರ್ಮೋಪದೇಶಕಾಂಡ 33:25

ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 33

23ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.

24ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.

25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.

26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.

27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.

ಧರ್ಮೋಪದೇಶಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी