ಮಾರ್ಕನು 2:13

ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 2

11ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.

13ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.

14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.

15ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.

ಮಾರ್ಕನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी