ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ?
10ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
11ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.
12ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ?
13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
14ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ