ಮತ್ತಾಯನು 18:16

ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.

ಸಂದರ್ಭದೊಂದಿಗೆ ಓದಿ · ಮತ್ತಾಯನು 18

14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

15ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.

17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

18ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.

ಮತ್ತಾಯನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी