ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
29ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
30ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.
31ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
32ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.
33ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ