ಯೆಶಾಯ 41:16

ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.

ಸಂದರ್ಭದೊಂದಿಗೆ ಓದಿ · ಯೆಶಾಯ 41

14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್‌ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!

15ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.

16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.

17ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್‌ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.

18ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.

ಯೆಶಾಯ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी