ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
30ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.
31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.
32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ