ಲೂಕನು 21:23

ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.

ಸಂದರ್ಭದೊಂದಿಗೆ ಓದಿ · ಲೂಕನು 21

21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.

22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.

23ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.

24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.

25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.

ಲೂಕನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी