೧ ಪೇತ್ರನು 2:6

ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 2

4ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.

5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

6ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.

7ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.

೧ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी