ಯೆಹೆಜ್ಕೇಲನು 29:9

ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 29

7ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.

8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.

9ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.

10ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.

11ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ.

ಯೆಹೆಜ್ಕೇಲನು 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी