ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
22ಚಿಲ್ಲಾ ಸಹ ತೂಬಲ್ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್ಕಾಯಿನನ ಸಹೋದರಿ ನಯಮಾ ಎಂಬವಳು.
23ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
24ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
25ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.
26ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ