ದಾನಿಯೇಲನು 8:4

ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 8

2ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್‌ ಸೀಮೆ ಯಲ್ಲಿರುವ ಶೂಷನ್‌ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.

3ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.

4ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.

5ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.

6ನಾನು ನೋಡಿದ ನದಿಯ ಹತ್ತಿರವಿದ್ದ ಎರಡು ಕೊಂಬಿನ ಟಗರಿನ ಬಳಿಗೆ ಅದು ಬಂದು ಪರಾಕ್ರಮದಿಂದ ರೋಷಗೊಂಡು ಅದರ ಬಳಿಗೆ ಓಡಿತು.

ದಾನಿಯೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी