ಯೆರೆಮಿಯ 31:8

ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 31

6ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.

7ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.

8ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.

9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.

10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.

ಯೆರೆಮಿಯ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी