ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
5ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.
6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
8ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ