ಅರಣ್ಯಕಾಂಡ 13:32

ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 13

30ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.

31ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.

32ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.

33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.

ಅರಣ್ಯಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी