ಯೆರೆಮಿಯ 32:4

ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 32

2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.

3ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;

4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.

5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.

6ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--

ಯೆರೆಮಿಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी